Luke 20:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
Kannada BSI Bible 2016
ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುವದೋ ಅವನನ್ನು ಪುಡಿ ಪುಡಿ ಮಾಡುವದು ಅಂದನು.
Kannada Bible (KNCL) BSI 2016
ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನೂ ಛಿದ್ರಛಿದ್ರವಾಗುವನು. ಯಾವನ ಮೇಲೆ ಈ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.