Luke 20:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
Kannada BSI Bible 2016
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಸ್ತ್ರಿಗಳೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡಿದರು; ಆದರೆ ಜನರಿಗೆ ಭಯಪಟ್ಟರು.
Kannada Bible (KNCL) BSI 2016
ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.