Luke 20:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
Kannada BSI Bible 2016
ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ - ನನಗೆ ಒಂದು ಹಣವನ್ನು ತೋರಿಸಿರಿ. ಇದರಲ್ಲಿ ಯಾರ ತಲೆಯೂ ಮುದ್ರೆಯೂ ಅದೆ ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.
Kannada Bible (KNCL) BSI 2016
“ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು. ಅದಕ್ಕೆ ಅವರು, “ರೋಮ್‍ ಚಕ್ರವರ್ತಿಯವು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಂದು ಬೆಳ್ಳಿ ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಅವರನ್ನು ಕೇಳಲು ಅವರು, “ಕೈಸರನದು,” ಎಂದರು.