Luke 20:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಬರೆದಿದ್ದಾನಷ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
Kannada BSI Bible 2016
ಬೋಧಕನೇ, ಹೆಂಡತಿ ಇದ್ದ ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋ ದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದುಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
Kannada Bible (KNCL) BSI 2016
“ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಸಹೋದರನು ಅವನ ಪತ್ನಿಯನ್ನು ಮದುವೆಯಾಗಿ ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆ ನಮಗೆ ಬರೆದಿಟ್ಟಿದ್ದಾನೆ.