Luke 20:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
Kannada BSI Bible 2016
ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇನ್ನು ಮರಣಕ್ಕೆ ಗುರಿಯಾಗುವದೇ ಇಲ್ಲ. ಪುನರುತ್ಥಾನವನ್ನು ಹೊಂದಿದವರಾಗಿದ್ದು ದೇವದೂತರಿಗೆ ಸರಿಸಮಾನರೂ ದೇವರ ಮಕ್ಕಳೂ ಆಗಿದ್ದಾರೆ. ಸತ್ತವರು ಬದುಕಿ ಏಳುತ್ತಾರೆಂಬದನ್ನು ಮೋಶೆಯು ಸೂಚಿಸಿದ್ದಾನೆ.
Kannada Bible (KNCL) BSI 2016
ಅವರು ಅಲ್ಲಿ ದೇವದೂತರಿಗೆ ಸಮಾನರಾಗಿರುವರು; ಅವರು ಎಂದಿಗೂ ಸಾಯುವಂತಿಲ್ಲ; ಪುನರುತ್ಥಾನದ ಫಲ ಆಗಿರುವ ಅವರು ದೇವರ ಮಕ್ಕಳಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.