Luke 20:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
Kannada BSI Bible 2016
ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ.
Kannada Bible (KNCL) BSI 2016
ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯ ಗ್ರಂಥದಲ್ಲಿ, ಅಂದರೆ ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲಿ ಸರ್ವೇಶ್ವರನನ್ನು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು ಆಗಿದ್ದಾರೆ’ ಎಂದು ಹೇಳಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಉರಿಯುವ ಪೊದೆಯ ಬಳಿ ಕರ್ತದೇವರು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು,’ ಎಂದು ತಿಳಿಸಿ ಸತ್ತವರು ಏಳುತ್ತಾರೆಂಬದನ್ನು ಮೋಶೆಗೆ ವ್ಯಕ್ತಪಡಿಸಿದ್ದಾರೆ.