Luke 20:46 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
Kannada BSI Bible 2016
ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;ಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನ, ಇವುಗಳಲ್ಲಿ ಇಷ್ಟವುಳ್ಳವರೂ ಆಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಬಯಸುವವರಾಗಿದ್ದಾರೆ;