Luke 20:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
Kannada BSI Bible 2016
ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡು
Kannada Bible (KNCL) BSI 2016
ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,