Luke 20:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
Kannada BSI Bible 2016
ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಎಂದು ಹೇಳಿದನು. ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವದಕ್ಕೆ ತೊಡಗಿದನು.
Kannada Bible (KNCL) BSI 2016
ಅದಕ್ಕೆ ಯೇಸು, “ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.