Luke 20:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
Kannada BSI Bible 2016
ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
Kannada Bible (KNCL) BSI 2016
ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.