Luke 21:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.
Kannada BSI Bible 2016
ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಮಹಾಭೂಕಂಪಗಳಾಗುವವು; ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು; ಉತ್ಪಾತಗಳೂ ಆಕಾಶದಲ್ಲಿ ಮಹಾ ಸೂಚನೆಗಳೂ ತೋರುವವು.
Kannada Bible (KNCL) BSI 2016
ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.