Luke 21:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.
Kannada BSI Bible 2016
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.
Kannada Bible (KNCL) BSI 2016
ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.