Luke 21:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.
Kannada BSI Bible 2016
ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು.
Kannada Bible (KNCL) BSI 2016
ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.