Luke 21:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.
Kannada BSI Bible 2016
ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹಗಲು ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಇಳುಕೊಳ್ಳುತ್ತಾ ಇದ್ದನು.
Kannada Bible (KNCL) BSI 2016
ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು, ರಾತ್ರಿಯಲ್ಲಿ ಹೊರಟುಹೋಗಿ ಓಲಿವ್ ಗುಡ್ಡದಲ್ಲಿ ವಾಸಿಸುತ್ತಿದ್ದರು.