Luke 21:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಈ ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಆ ಹಣದ ಅವಶ್ಯವಿತ್ತು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ ಅವರೆಲ್ಲರು ತಮಗೆ ಸಾಕಾಗಿ ಮಿಕ್ಕದ್ದರಲ್ಲಿ ಕಾಣಿಕೆ ಕೊಟ್ಟರು. ಈಕೆಯೋ ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕಿದ್ದುದ್ದೆಲ್ಲವನ್ನೂ ಕೊಟ್ಟುಬಿಟ್ಟಳು” ಅಂದನು.
Kannada BSI Bible 2016
ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಅವರೆಲ್ಲರು ತಮಗೆ ಸಾಕಾಗಿ ವಿುಕ್ಕದ್ದರಲ್ಲಿ ಕಾಣಿಕೆಕೊಟ್ಟರು; ಈಕೆಯೋ ತನ್ನ ಬಡತನದಲ್ಲಿಯೂ ತನಗಿದ್ದ ಜೀವನವನ್ನೆಲ್ಲಾ ಕೊಟ್ಟುಬಿಟ್ಟಳು ಅಂದನು.
Kannada Bible (KNCL) BSI 2016
ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ, ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ,” ಎಂದರು.