Luke 21:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.
Kannada BSI Bible 2016
ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ನೀವು ಇವುಗಳನ್ನು ನೋಡುತ್ತೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿವಸಗಳು ಬರುವವು ಅಂದನು.
Kannada Bible (KNCL) BSI 2016
ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.