Luke 22:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,
Kannada BSI Bible 2016
ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ
Kannada Bible (KNCL) BSI 2016
“ನೀವು ಪಟ್ಟಣವನ್ನು ಪ್ರವೇಶಿಸುವಾಗ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬನನ್ನು ಎದುರುಗೊಳ್ಳುವಿರಿ. ಅವನನ್ನು ಹಿಂಬಾಲಿಸಿ, ಅವನು ಹೋಗುವ ಮನೆಗೆ ಹೋಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರಿಗೆ, “ನೀವು ಪಟ್ಟಣವನ್ನು ಪ್ರವೇಶಿಸಿದಾಗ, ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡಿರುವ ಒಬ್ಬನು ನಿಮ್ಮನ್ನು ಸಂಧಿಸುವನು. ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.