Luke 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನೆಯ ಯಜಮಾನನಿಗೆ, ‘ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
Kannada BSI Bible 2016
ನೀವು ಆ ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ಭೋಜನ ಶಾಲೆ ಎಲ್ಲಿ ಎಂದು ನಿನ್ನನ್ನು ಕೇಳುತ್ತಾನೆ ಎಂಬದಾಗಿ ಹೇಳಿರಿ.
Kannada Bible (KNCL) BSI 2016
ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ಕೊಠಡಿ ಎಲ್ಲಿ, ಎಂದು ನಿಮ್ಮನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾರೆ,’ ಎನ್ನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ’ ಎಂದು ಹೇಳಿರಿ.