Luke 22:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮನೆಯ ಯಜಮಾನನು ಮೇಲಂತಸ್ತಿನಲ್ಲಿ ಒಂದು ದೊಡ್ಡ ಕೋಣೆಯನ್ನು ತೋರಿಸುವನು. ಈ ಕೋಣೆಯು ನಿಮಗಾಗಿ ಸಿದ್ಧವಾಗಿರುವುದು. ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿರಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.
Kannada BSI Bible 2016
ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಕ್ಕ ಸಾಮಾನಿಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ಸಿದ್ಧಮಾಡಿರಿ ಎಂದು ಹೇಳಿ ಕಳುಹಿಸಿದನು.
Kannada Bible (KNCL) BSI 2016
ಅವನು ಮೇಲ್ಮಾಳಿಗೆಯಲ್ಲಿ ವಿಶಾಲವಾದ ಹಾಗೂ ಸುಸಜ್ಜಿತವಾದ ಕೊಠಡಿಯೊಂದನ್ನು ತೋರಿಸುವನು. ಅಲ್ಲಿ ಸಿದ್ಧಮಾಡಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕ್ರಮಪಡಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿಯೇ ಪಸ್ಕಭೋಜನ ಸಿದ್ಧಪಡಿಸಿರಿ,” ಎಂದರು.