Luke 22:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
Kannada BSI Bible 2016
ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.
Kannada Bible (KNCL) BSI 2016
ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.