Luke 22:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
Kannada BSI Bible 2016
ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
Kannada Bible (KNCL) BSI 2016
ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.