Luke 22:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
Kannada BSI Bible 2016
ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
Kannada Bible (KNCL) BSI 2016
ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.