Luke 22:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ಅವರಿಗೆ, “ಈ ಲೋಕದ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ. ಜನರ ಮೇಲೆ ಅಧಿಕಾರ ಹೊಂದಿರುವವರನ್ನು ಧರ್ಮಿಷ್ಠರೆಂದು ಕರೆಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
Kannada BSI Bible 2016
ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ಅವರಿಗೆ - ಅನ್ಯದೇಶದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರ ನಡಿಸುವವರು ಧರ್ಮಿಷ್ಠರೆನಿಸಿಕೊಳ್ಳುತ್ತಾರೆ.
Kannada Bible (KNCL) BSI 2016
ಆಗ ಯೇಸುಸ್ವಾಮಿ, “ಲೌಕಿಕ ರಾಜರು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆ; ಅಧಿಕಾರ ನಡೆಸುವವರು ಧರ್ಮಿಷ್ಠರೆನಿಸಿಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರಿಗೆ, “ಯೆಹೂದ್ಯರಲ್ಲದವರ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡೆಸುವವರು ಉಪಕಾರಿಗಳು ಎಂದು ಎಣಿಸಿಕೊಳ್ಳುತ್ತಾರೆ.