Luke 22:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶ್ರೇಷ್ಠನಾದವನು ಯಾರು? ಊಟಕ್ಕೆ ಕುಳಿತವನೋ? ಅಥವಾ ಅವನಿಗೆ ಸೇವೆ ಮಾಡುವವನೋ? ಊಟಕ್ಕೆ ಕುಳಿತಿರುವವನೇ ಶ್ರೇಷ್ಠನೆಂದು ನೀವು ಭಾವಿಸುತ್ತೀರೋ? ಆದರೆ ನಾನು ನಿಮ್ಮಲ್ಲಿ ಸೇವಕನಂತಿದ್ದೇನೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
Kannada BSI Bible 2016
ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
Kannada Bible (KNCL) BSI 2016
ಈ ಇಬ್ಬರಲ್ಲಿ ದೊಡ್ಡವನು ಯಾರು - ಊಟ ಮಾಡುವವನೋ? ಊಟ ಬಡಿಸುವವನೋ? ಖಂಡಿತವಾಗಿ ಊಟ ಮಾಡುವವನು. ಆದರೂ ಊಟ ಬಡಿಸುವ ಊಳಿಗದವನಂತೆ ನಾನು ನಿಮ್ಮ ನಡುವೆ ಇದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರು ದೊಡ್ಡವನು? ಊಟಕ್ಕೆ ಕುಳಿತುಕೊಂಡಿರುವವನೋ ಅಥವಾ ಸೇವೆ ಮಾಡುವವನೋ? ಊಟಕ್ಕೆ ಕುಳಿತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.