Luke 22:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.
Kannada BSI Bible 2016
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
Kannada Bible (KNCL) BSI 2016
ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.