Luke 22:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
Kannada BSI Bible 2016
ಆದರೆ ನಿನ್ನ ನಂಬಿಕೆಯು ಬಿದ್ದುಹೋಗದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ; ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.
Kannada Bible (KNCL) BSI 2016
ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.