Luke 22:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು, “ಪೇತ್ರನೇ, ನಾಳೆ ಬೆಳಿಗ್ಗೆ ಕೋಳಿ ಕೂಗುವ ಮೊದಲು ನನ್ನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವೆ!” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.
Kannada BSI Bible 2016
ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಪೇತ್ರನೇ, ನನ್ನ ವಿಷಯದಲ್ಲಿ - ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವದಿಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಆಗ ಯೇಸು, “ಪೇತ್ರನೇ, ಇಂದು ಕೋಳಿಕೂಗುವ ಮೊದಲೇ ನನ್ನನ್ನು ಅರಿಯೆನೆಂದು ನೀನು ಮೂರು ಬಾರಿ ಬೊಂಕುವೆ, ಇದು ಖಂಡಿತ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.