Luke 22:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
Kannada BSI Bible 2016
ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
Kannada Bible (KNCL) BSI 2016
ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.