Luke 22:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
Kannada BSI Bible 2016
ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆತನು - ಈಗಲಾದರೋ ಹಮ್ಮೀಣಿಯಿದ್ದವನು ಅದನ್ನು ತಕ್ಕೊಳ್ಳಲಿ, ಹಸಿಬೆಯಿದ್ದವನು ಅದನ್ನು ತಕ್ಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
Kannada Bible (KNCL) BSI 2016
“ಆದರೆ ಈಗ ಬುತ್ತಿಯಿರುವವನು ಅದನ್ನು ತೆಗೆದುಕೊಳ್ಳಲಿ; ಜೋಳಿಗೆಯಿರುವವನು ಹಾಗೆಯೇ ಮಾಡಲಿ; ಮತ್ತು ಕತ್ತಿಯಿಲ್ಲದವನು ತನ್ನ ಹೊದಿಕೆಯನ್ನು ಮಾರಿ ಒಂದನ್ನು ಕೊಂಡುಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ.