Luke 22:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ \rq ಯೆಶಾಯ 53:12\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.
Kannada BSI Bible 2016
ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.
Kannada Bible (KNCL) BSI 2016
ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.

Recommended Reading