Luke 22:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.
Kannada BSI Bible 2016
ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು.
Kannada Bible (KNCL) BSI 2016
ಆ ಯೂದನು ಮುಖ್ಯಯಾಜಕರ ಬಳಿಗೆ ಹಾಗೂ ಮಹಾದೇವಾಲಯದ ಪಹರೆಯ ದಳಪತಿಗಳ ಬಳಿಗೆ ಹೋಗಿ, ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಸಮಾಲೋಚಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.