Luke 22:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.
Kannada BSI Bible 2016
ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಸುತ್ತಲಿದ್ದವರು ಮುಂದೆ ಆಗುವದನ್ನು ತಿಳಿದು - ಸ್ವಾಮೀ, ನಾವು ಕತ್ತಿಯಿಂದ ಹೊಡೆಯೋಣೋ ಎಂದು ಕೇಳಿದರು.
Kannada Bible (KNCL) BSI 2016
ಸುತ್ತಲಿದ್ದ ಶಿಷ್ಯರು ಮುಂದೇನಾಗುವುದೆಂದು ಅರಿತುಕೊಂಡು, “ಗುರುವೇ, ಕತ್ತಿಯಿಂದ ಕಡಿಯೋಣವೇ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಸುತ್ತಲಿದ್ದ ಶಿಷ್ಯರು ಮುಂದೆ ಸಂಭವಿಸುವುದನ್ನು ಅರಿತು ಯೇಸುವಿಗೆ, “ಕರ್ತದೇವರೇ, ನಾವು ಖಡ್ಗದಿಂದ ಹೊಡೆಯೋಣವೋ?” ಎಂದು ಕೇಳಿದರು.