Luke 22:52 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?
Kannada BSI Bible 2016
ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಯೇಸು ತನ್ನನ್ನು ಹಿಡಿಯುವದಕ್ಕೆ ಬಂದ ಮಹಾಯಾಜಕರಿಗೂ ದೇವಾಲಯದ ಕಾವಲಿನ ದಳವಾಯಿಗಳಿಗೂ ಸಭೆಯ ಹಿರಿಯರಿಗೂ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರಾ?
Kannada Bible (KNCL) BSI 2016
ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?