Luke 22:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.
Kannada BSI Bible 2016
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.
Kannada Bible (KNCL) BSI 2016
ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.