Luke 22:55 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.
Kannada BSI Bible 2016
ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕೂತುಕೊಳ್ಳಲು ಅವರ ನಡುವೆ ಪೇತ್ರನೂ ಕೂತುಕೊಂಡನು.
Kannada Bible (KNCL) BSI 2016
ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ ಅದರ ಸುತ್ತಲೂ ಅವರೆಲ್ಲರು ಕುಳಿತುಕೊಂಡಾಗ, ಪೇತ್ರನು ಅವರ ಸಂಗಡ ಸೇರಿ ಕುಳಿತುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ, ಅದರ ಸುತ್ತಲೂ ಒಟ್ಟಾಗಿ ಕುಳಿತುಕೊಂಡಾಗ ಪೇತ್ರನೂ ಅವರ ಸಂಗಡ ಸೇರಿ ಕುಳಿತುಕೊಂಡನು.