Luke 22:56 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಅಲ್ಲಿ ಕುಳಿತಿರುವುದನ್ನು ಒಬ್ಬ ಸೇವಕಿ ನೋಡಿದಳು. ಬೆಂಕಿಯ ಬೆಳಕಿನಿಂದ ಆಕೆಯು ಪೇತ್ರನನ್ನು ಗುರುತಿಸಿದಳು. ಅವಳು ಪೇತ್ರನ ಮುಖವನ್ನೇ ಲಕ್ಷ್ಯವಿಟ್ಟು ನೋಡಿ, “ಈ ಮನುಷ್ಯನು ಆತನ (ಯೇಸು)ಸಂಗಡ ಇದ್ದವನು” ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.
Kannada BSI Bible 2016
ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬೆಳಕಿಗೆ ಮುಖವಾಗಿ ಕೂತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು ಅವನನ್ನು ದೃಷ್ಟಿಸಿ ನೋಡಿ - ಇವನು ಸಹ ಅವನ ಸಂಗಡ ಇದ್ದವನು ಅಂದಳು.
Kannada Bible (KNCL) BSI 2016
ಬೆಂಕಿಯ ಬೆಳಕಿನಲ್ಲಿ ಕುಳಿತಿದ್ದ ಆತನನ್ನು ದಾಸಿಯೊಬ್ಬಳು ದೃಷ್ಟಿಸಿ ನೋಡಿ, “ಇವನು ಕೂಡ ಯೇಸುವಿನ ಸಂಗಡ ಇದ್ದವನು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಒಬ್ಬ ದಾಸಿಯು ಬೆಂಕಿಯ ಬಳಿಯಲ್ಲಿ ಕುಳಿತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ, “ಈ ಮನುಷ್ಯನು ಸಹ ಯೇಸುವಿನ ಸಂಗಡ ಇದ್ದವನು,” ಎಂದಳು.