Luke 22:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ವಲ್ಪ ಸಮಯದ ನಂತರ ಇನ್ನೊಬ್ಬ ವ್ಯಕ್ತಿ ಪೇತ್ರನನ್ನು ನೋಡಿ, “ನೀನು ಯೇಸುವನ್ನು ಹಿಂಬಾಲಿಸುತ್ತಿದ್ದ ಜನರಲ್ಲಿ ಒಬ್ಬನಾಗಿದ್ದೆ!” ಎಂದು ಹೇಳಿದನು. ಆದರೆ ಪೇತ್ರನು, “ನಾನು ಆತನ ಹಿಂಬಾಲಕರಲ್ಲಿ ಒಬ್ಬನಲ್ಲ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.
Kannada BSI Bible 2016
ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತುಸು ಹೊತ್ತಿನ ಮೇಲೆ ಒಬ್ಬನು ಅವನನ್ನು ಕಂಡು - ನೀನು ಸಹ ಅವರಲ್ಲಿ ಒಬ್ಬನು ಅನ್ನಲು ಪೇತ್ರನು - ಅಲ್ಲಪ್ಪಾ ಅಂದನು.
Kannada Bible (KNCL) BSI 2016
ಸ್ವಲ್ಪಹೊತ್ತಾದ ಮೇಲೆ ಇನ್ನೊಬ್ಬನು ಆತನನ್ನು ಕಂಡು, “ನೀನು ಕೂಡ ಅವರಲ್ಲಿ ಒಬ್ಬನು,” ಎನ್ನಲು ಪೇತ್ರನು, “ಇಲ್ಲಪ್ಪಾ, ನಾನಲ್ಲ,” ಎಂದುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಪೇತ್ರನನ್ನು ಕಂಡು, “ನೀನು ಸಹ ಅವರಲ್ಲಿ ಒಬ್ಬನು,” ಎಂದನು. ಅದಕ್ಕೆ ಪೇತ್ರನು, “ಇಲ್ಲಪ್ಪ, ನಾನಲ್ಲ,” ಎಂದನು.