Luke 22:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.
Kannada BSI Bible 2016
ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ಗದ್ದಲವಾಗದಂತೆ ಅವರಿಗೆ ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು.
Kannada Bible (KNCL) BSI 2016
ಅವನೂ ಸಮ್ಮತಿಸಿ, ಜನಜಂಗುಳಿ ಇಲ್ಲದ ಸಂದರ್ಭದಲ್ಲಿ ಯೇಸುವನ್ನು ಹಿಡಿದು ಒಪ್ಪಿಸಲು ಸಮಯ ಕಾಯುತ್ತಾ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನೂ ಸಮ್ಮತಿಸಿ, ಜನಸಮೂಹವು ಇಲ್ಲದಿರುವಾಗ ಯೇಸುವನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಕಾಯುತ್ತಿದ್ದನು.