Luke 22:61 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪ್ರಭುವು(ಯೇಸು) ಹಿಂತಿರುಗಿ ಪೇತ್ರನನ್ನು ದೃಷ್ಟಿಸಿ ನೋಡಿದನು. “ಮುಂಜಾನೆ ಕೋಳಿ ಕೂಗುವುದಕ್ಕಿಂತ ಮೊದಲು ನೀನು ನನ್ನನ್ನು ಅರಿಯೆನೆಂಬುದಾಗಿ ಮೂರು ಸಲ ಹೇಳುವೆ” ಎಂದು ಪ್ರಭುವು ಹೇಳಿದ ಮಾತನ್ನು ಪೇತ್ರನು ಆಗ ಜ್ಞಾಪಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
Kannada BSI Bible 2016
ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಾವಿುಯು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು - ಈಹೊತ್ತು ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಸ್ವಾವಿು ನುಡಿದ ಮಾತನ್ನು ನೆನಸಿ
Kannada Bible (KNCL) BSI 2016
ಆಗ ಪ್ರಭು ಯೇಸು ಹಿಂದಿರುಗಿ ಪೇತ್ರನನ್ನು ದಿಟ್ಟಿಸಿ ನೋಡಿದರು. “ಈ ದಿನ ಕೋಳಿ ಕೂಗುವ ಮೊದಲೇ, ‘ನಾನು ಆತನನ್ನು ಅರಿಯೆನು,’ ಎಂದು ನನ್ನನ್ನು ಮೂರು ಬಾರಿ ನಿರಾಕರಿಸುವೆ,” ಎಂದು ಯೇಸು ನುಡಿದಿದ್ದ ಮಾತುಗಳು ಪೇತ್ರನ ನೆನಪಿಗೆ ಬಂದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕರ್ತದೇವರು ಹಿಂದಿರುಗಿ ಪೇತ್ರನ ಕಡೆಗೆ ದಿಟ್ಟಿಸಿ ನೋಡಿದರು. “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ,” ಎಂದು ಕರ್ತದೇವರು ತನಗೆ ಹೇಳಿದ್ದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು