Luke 22:66 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
Kannada BSI Bible 2016
ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಗಾಗುವಾಗ ಯೆಹೂದ್ಯರ ಹಿರೀ ಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು -
Kannada Bible (KNCL) BSI 2016
ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,