Luke 23:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
(ಶಿಲುಬೆಯ ಮೇಲ್ಭಾಗದಲ್ಲಿ, “\sc ಈತನು ಯೆಹೂದ್ಯರ ಅರಸನು \sc*” ಎಂದು ಬರೆಯಲಾಗಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.
Kannada BSI Bible 2016
ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್‌ ಲ್ಯಾಟಿನ್‌ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನ ಮೇಲ್ಗಡೆಯಲ್ಲಿ - ಇವನು ಯೆಹೂದ್ಯರ ಅರಸನು ಎಂಬದಾಗಿ ಒಂದು ವಿಳಾಸವಿತ್ತು.
Kannada Bible (KNCL) BSI 2016
ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಶಿಲುಬೆಯ ಮೇಲ್ಗಡೆಯಲ್ಲಿ ಒಂದು ಲಿಖಿತ ಹೀಗಿತ್ತು: ಈತನು ಯೆಹೂದ್ಯರ ಅರಸನು.