Luke 23:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಕರ್ಮಿಗಳಲ್ಲೊಬ್ಬನು ಯೇಸುವನ್ನು ದೂಷಿಸಿ, “ನೀನು ಕ್ರಿಸ್ತನಲ್ಲವೋ? ಹಾಗಾದರೆ ನಿನ್ನನ್ನು ರಕ್ಷಿಸಿಕೊ! ನಮ್ಮನ್ನೂ ರಕ್ಷಿಸು!” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
Kannada BSI Bible 2016
ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೂಗಹಾಕಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ - ನೀನು ಬರಬೇಕಾದ ಕ್ರಿಸ್ತನಲ್ಲವೇ, ನಿನ್ನನ್ನು ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು ಎಂದು ಹೇಳಿದ್ದಕ್ಕೆ
Kannada Bible (KNCL) BSI 2016
ತೂಗುಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತ, ಅಲ್ಲವೆ? ಹಾಗಾದರೆ ನಿನ್ನನ್ನು ನೀನೇ ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು,” ಎಂದು ಹಂಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಲುಬೆಗೆ ಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು, ನಮ್ಮನ್ನೂ ರಕ್ಷಿಸು,” ಎಂದು ಯೇಸುವನ್ನು ದೂಷಿಸಿದನು.