Luke 23:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
Kannada BSI Bible 2016
ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನ ಪರಿಚಿತಿಯವರೆಲ್ಲರೂ ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
Kannada Bible (KNCL) BSI 2016
ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯದಿಂದ ಅವರನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.