Luke 23:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಿಮಥಾಯ ಎಂಬುದು ಯೆಹೂದ್ಯರ ಒಂದು ಊರು. ಯೋಸೇಫನು ಇದರ ನಿವಾಸಿ. ಇವನು ಒಳ್ಳೆಯ ಧಾರ್ಮಿಕ ವ್ಯಕ್ತಿಯಾಗಿದ್ದನು. ದೇವರ ರಾಜ್ಯದ ಆಗಮನವನ್ನು ಇವನು ನಿರೀಕ್ಷಿಸಿದ್ದನು. ಯೋಸೇಫನು ಯೆಹೂದ್ಯರ ಹಿರಿಸಭೆಯ ಸದಸ್ಯನಾಗಿದ್ದನು. ಆದರೆ ಬೇರೆ ಯೆಹೂದ್ಯ ನಾಯಕರು ಯೇಸುವನ್ನು ಕೊಲ್ಲಲು ತೀರ್ಮಾನಿಸಿದಾಗ ಇವನು ಅದಕ್ಕೆ ಒಪ್ಪಲಿಲ್ಲ. (Verses 50-51)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
Kannada BSI Bible 2016
ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ.
Kannada Bible (KNCL) BSI 2016
ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು, ಇವನು ಆಲೋಚನಾ ಸಭೆಯವನೂ ಒಳ್ಳೆಯವನೂ ಮತ್ತು ನೀತಿವಂತನೂ ಆಗಿದ್ದನು.