Luke 23:53 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಇವನು ಯೇಸುವಿನ ದೇಹವನ್ನು ಶಿಲುಬೆಯಿಂದ ಇಳಿಸಿ ಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಈ ಸಮಾಧಿಯಲ್ಲಿ ಬೇರೆ ಯಾರನ್ನೂ ಎಂದೂ ಹೂಳಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.
Kannada BSI Bible 2016
ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನೂ ಮಲಗಿಸಿರಲಿಲ್ಲ.
Kannada Bible (KNCL) BSI 2016
ತರುವಾಯ ಶರೀರವನ್ನು ಶಿಲುಬೆಯಿಂದ ಇಳಿಸಿ, ನಾರುಮಡಿವಸ್ತ್ರದಲ್ಲಿ ಸುತ್ತಿ ಸಮಾಧಿಯಲ್ಲಿ ಇಟ್ಟನು. ಬಂಡೆಯೊಂದರಲ್ಲಿ ಕೊರೆಯಲಾಗಿದ್ದ ಈ ಸಮಾಧಿಯಲ್ಲಿ ಅದುವರೆಗೆ ಯಾರನ್ನೂ ಭೂಸ್ಥಾಪನೆ ಮಾಡಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಇವನು ಶರೀರವನ್ನು ಕೆಳಗೆ ಇಳಿಸಿ, ನಾರುಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಇಟ್ಟನು, ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿರಲಿಲ್ಲ.