Luke 23:55 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು ಯೋಸೇಫನನ್ನು ಹಿಂಬಾಲಿಸಿದರು. ಅವರು ಸಮಾಧಿಯನ್ನೂ ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳವನ್ನೂ ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ,
Kannada BSI Bible 2016
ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ರೀತಿಯನ್ನೂ ನೋಡಿ
Kannada Bible (KNCL) BSI 2016
ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಲಿಲಾಯದಿಂದ ಯೇಸುವಿನೊಂದಿಗೆ ಬಂದ ಸ್ತ್ರೀಯರು ಅರಿಮಥಾಯದ ಯೋಸೇಫನೊಂದಿಗೆ ಹೋಗಿ, ಸಮಾಧಿಯನ್ನೂ ದೇಹವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿದರು.