Luke 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.
Kannada BSI Bible 2016
ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯರು ಸಬ್ಬತ್‍ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರವಿುಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗ ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.
Kannada Bible (KNCL) BSI 2016
ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು.