Luke 24:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯರು ಯಾರಾರೆಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು.
Kannada BSI Bible 2016
ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯರು ಯಾರಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು.
Kannada Bible (KNCL) BSI 2016
ಆ ಮಹಿಳೆಯರ ಹೆಸರುಗಳು: ಮಗ್ದಲದ ಮರಿಯಳು, ಯೊವಾನ್ನಳು ಮತ್ತು ಯಕೋಬನ ತಾಯಿಯಾದ ಮರಿಯಳು. ಇವರಲ್ಲದೆ, ಇವರ ಸಂಗಡ ಇದ್ದ ಇತರ ಮಹಿಳೆಯರೂ ಪ್ರೇಷಿತರಿಗೆ ಈ ಸುದ್ದಿಯನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.