Luke 24:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಪೇತ್ರನು ಎದ್ದು ಇದು ನಿಜವೇ ಎಂದು ನೋಡಲು ಸಮಾಧಿಗೆ ಓಡಿಹೋದನು. ಅವನು ಒಳಗೆ ಹೋಗಿ ಬಗ್ಗಿ ನೋಡಿದಾಗ ಯೇಸುವಿನ ದೇಹಕ್ಕೆ ಸುತ್ತಿದ್ದ ಬಟ್ಟೆಯನ್ನು ಮಾತ್ರ ನೋಡಿದನು. ಕೇವಲ ಬಟ್ಟೆಯು ಅಲ್ಲಿ ಬಿದ್ದಿತ್ತು. ನಡೆದ ಈ ಸಂಗತಿಯ ಬಗ್ಗೆ ಪೇತ್ರನು ಆಶ್ಚರ್ಯಪಡುತ್ತಾ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪೇತ್ರನು ಎದ್ದು ಸಮಾಧಿ ಬಳಿಗೆ ಓಡಿಹೋಗಿ, ಬೊಗ್ಗಿ ನೋಡಿ, ನಾರುಬಟ್ಟೆಗಳನ್ನು ಮಾತ್ರ ಕಂಡು, ನಡೆದ ಸಂಗತಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟು ಹೋದನು.
Kannada BSI Bible 2016
ಆಗ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಕೆಳಗೆ ಬೊಗ್ಗಿ ನಾರುಬಟ್ಟೆಗಳು ಮಾತ್ರ ಬಿದ್ದಿರುವದನ್ನು ನೋಡಿ ನಡೆದ ವಿಷಯಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಆದರೆ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಬೊಗ್ಗಿನೋಡಿ ನಾರುಬಟ್ಟೆಗಳನ್ನು ಮಾತ್ರ ಕಂಡು ನಡೆದ ಸಂಗತಿಗಳಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟುಹೋದನು].
Kannada Bible (KNCL) BSI 2016
ಆದರೆ ಪೇತ್ರನು ಎದ್ದು ಸಮಾಧಿಯ ಬಳಿಗೆ ಧಾವಿಸಿದನು. ಸಮಾಧಿಯೊಳಕ್ಕೆ ಬಗ್ಗಿನೋಡಿದಾಗ, ಶವಕ್ಕೆ ಸುತ್ತಿದ್ದ ನಾರುಮಡಿ ವಸ್ತ್ರಗಳು ಮಾತ್ರ ಅಲ್ಲಿ ಬಿದ್ದಿರುವುದನ್ನು ಕಂಡನು. ಇವೆಲ್ಲಾ ಎಷ್ಟೋ ಆಶ್ಚರ್ಯಕರವಾಗಿದೆ ಎಂದುಕೊಂಡು ಹಿಂದಿರುಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೇತ್ರನು ಎದ್ದು, ಸಮಾಧಿ ಬಳಿಗೆ ಓಡಿಹೋಗಿ, ಅದರೊಳಗೆ ಬಗ್ಗಿ ನೋಡಿದಾಗ, ಅಲ್ಲಿ ನಾರುಬಟ್ಟೆಗಳು ಮಾತ್ರ ಬಿದ್ದಿರುವುದನ್ನು ಕಂಡು ನಡೆದ ಸಂಭವಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.