Luke 24:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ದಿನ ಯೇಸುವಿನ ಶಿಷ್ಯರಲ್ಲಿ ಇಬ್ಬರು ಎಮ್ಮಾಹು ಎಂಬ ಪಟ್ಟಣಕ್ಕೆ ಹೋಗುತ್ತಿದ್ದರು. ಅದು ಜೆರುಸಲೇಮಿನಿಂದ ಏಳು ಮೈಲಿ ದೂರದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ,
Kannada BSI Bible 2016
ಆಗ ಇಗೋ, ಅದೇ ದಿನ ಅವರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂದು ಕರೆಯಲ್ಪಟ್ಟ ಹಳ್ಳಿಗೆ ಹೋಗುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇವಿುಗೆ ಆರುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ
Kannada Bible (KNCL) BSI 2016
ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲೊಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿನ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಹನ್ನೊಂದು ಕಿಲೋಮೀಟರು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಿದ್ದರು.